ಅಪ್ರಾಪ್ತ ಸಹೋದರಿಯ ಮೇಲೆಯೇ ಅಣ್ಣ ಅತ್ಯಾಚಾರ ನಡೆಸಿರುವ ಘಟನೆಯೊಂದು ನೆಡಿದಿದೆ.
ಯುವಕನೊಬ್ಬ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಭಯದಲ್ಲಿ ಬಾಲಕಿಯನ್ನು ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. ಸಂಜು ಬಂಧಿತ ಆರೋಪಿಯಾಗಿದ್ದು, ಕೃತ್ಯ ನಡೆಸುವುದಕ್ಕೂ ಮುನ್ನ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋವನ್ನು ವೀಕ್ಷಿಸಿದ್ದ ಎನ್ನಲಾಗಿದೆ.
ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ. ಈ ಕುರಿತು ಸಂತ್ರಸ್ತೆಯ ಚಿಕ್ಕಪ್ಪ ಸಂಜು ಕುಮಾರ್ ವಿರುದ್ಧ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ದಿನ ಅವನ ತಾಯಿ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದಳು. ಆಗ ಆತ ಸಹೋದರಿಯೊಂದಿಗೆ ಒಬ್ಬನೇ ಇದ್ದ. ಈ ವೇಳೆ ಅಶ್ಲೀಲ ವಿಡಿಯೋ ನೋಡಿದ್ದಾನೆ. ನಂತರ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.