ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಸಹೋದರಿಯರು
ಬೀದರ್: ಅಪ್ರಾಪ್ತ ಬಾಲಕಿಯರಿಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕು ಅಟ್ಟರ್ಗಾ ಗ್ರಾಮದಲ್ಲಿ ನಡೆದಿದೆ.
ಅಂಕಿತಾ(15) ಹಾಗೂ ಶ್ರದ್ಧಾ(13) ಮೃತ ದುರ್ದೈವಿಗಳು. ಇವರಿಬ್ಬರು ಸಹೋದರಿಯರಾಗಿದ್ದಾರೆ. ಇವರು ಗ್ರಾಮದ ಹೊರವಲಯದಲ್ಲಿರುವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೊದಲಿಗೆ ಶಂಕೆ ವ್ಯಕ್ತಗಿತ್ತು. ಆದರೆ ನಂತರ ಇವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೃತ ಸಹೋದರಿಯರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಮಕ್ಕಳ ಶವ ಸಂಸ್ಕಾರ ಮಾಡುವುದಿಲ್ಲ, ಮೊದಲು ನಮಗೆ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಮೇಹಕರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








