ಭಜ್ಜಿ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ವೃದ್ಧ
ಮಿರ್ಚಿ, ಭಜ್ಜಿ ಕೊಡಿಸುವ ನೆಪದಲ್ಲಿ 70 ವರ್ಷದ ವೃದ್ಧನೋರ್ವ 13 ವರ್ಷದ ಅಪ್ರಾಪ್ತ ಬಾಲಕಿಯನ್ನ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ..
ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.. ನವೆಂಬರ್ 29 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ನಿನ್ನೆ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ..
ಬಾಲಕಿ ಈ ಬಗ್ಗೆ ಮನೆಯವರಿಗೆ ತಿಳಿಸಿದ ನಂತರ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.