ಚಿತ್ರದುರ್ಗ: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪದ ಹಿನ್ನೆಲೆಯಲ್ಲಿ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ನೆಹರು ವೃತ್ತದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ(KSRTC) ಬಸ್ ನಿರ್ವಾಹಕ ಚಂದ್ರೇಗೌಡ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ನಿನ್ನೆ(ಜೂ.21) ಚಳ್ಳಕೆರೆಯಿಂದ ಇದೇ ಬಸ್ ನಲ್ಲಿ ಓರ್ವ ಮಹಿಳೆಯೊಬ್ಬರು ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸಲು ನಿರ್ವಾಹಕ ಚಂದ್ರೇಗೌಡ ಒಪ್ಪಿಲ್ಲ. ದಾಬಸ್ಪೇಟೆಯಲ್ಲಿ ಬಸ್ ನಿಲ್ಲಿಸದೆ ಅವರು ಸೀದಾ ಮೆಜೆಸ್ಟಿಕ್ ನಲ್ಲಿ ಬಸ್ ನಿಲ್ಲಿಸಿದ್ದರು.
ಈ ಸಂದರ್ಭದಲ್ಲಿ ಮಹಿಳೆ ಇದನ್ನು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಬಸ್ ನಿರ್ವಾಹಕ ಅನುಚಿತ ವರ್ತನೆ ತೋರಿದ್ದಾನೆಂದು ಮಹಿಳೆ ಆರೋಪಿಸಿದ್ದಾರೆ. ಹೀಗಾಗಿ ನಿರ್ವಾಹಕನಿಗೆ ಮಹಿಳಾ ಸಂಬಂಧಿಕರು ಸೇರಿ ಥಳಿಸಿದ್ದಾರೆ. ಹಲ್ಲೆಗೊಳಗಾದ ಬಸ್ ನಿರ್ವಾಹಕ ಚಂದ್ರೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.








