ಅಮರಾವತಿ: ಟ್ಯೂಷನ್ ಮುಗಿಸಿ ಮರಳಿ ಮನೆಗೆ ಬರುತ್ತಿದ್ದ ವಿದ್ಯಾರ್ಥಿಯ ಮೇಲೆ (Student) ಮೇಲೆ ದುಷ್ಕರ್ಮಿಗಳು ಪೆಟ್ರೋಲ್ (Petrol) ಸುರಿದು ಬೆಂಕಿ (Fire) ಹಚ್ಚಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆದಿದೆ.
ಆಂಧ್ರಪ್ರದೇಶದ ಬಾಪಟ್ಲಾ (Bapatla) ಜಿಲ್ಲೆಯಲ್ಲಿ 10ನೇ ತರಗತಿಯ ಬಾಲಕ (Boy) ಅಮರ್‌ನಾಥ್ (15) ಮೇಲೆಯೇ ದುಷ್ಕರ್ಮಿಗಳು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ. ವೆಂಕಟೇಶ್ವರ್ (21) ಹಾಗೂ ಇತರ ಮೂವರು ವ್ಯಕ್ತಿಗಳು ಬೆಂಕಿ ಹಚ್ಚಿ ಹತ್ಯೆ ಮಾಡಿರುವುದಾಗಿ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ವೆಂಕಟೇಶ್ವರ್ ಮೃತ ಬಾಲಕನ ಸಹೋದರಿಗೆ ಈ ಮೊದಲು ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆತ ಇತರ ಮೂವರೊಂದಿಗೆ ಪೆಟ್ರೋಲ್ ಸುರಿದಿದ್ದಾನೆ ಎಂದು ಕುಟುಂಬಸ್ಥರು ದೂರು ಸಲ್ಲಿಸಿದ್ದಾರೆ. ತೀವ್ರ ಸುಟ್ಟ ಗಾಯಗಳಿಂದಾಗಿ ಬಾಲಕನನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಬಾಲಕನುಗೆ ವೆಂಕಟೇಶ್ವರ್ ಹಾಗೂ ಇತರ ಮೂವರು ಬೆಂಕಿ ಹಚ್ಚಿದ್ದಾಗಿ ತಿಳಿಸಿದ್ದಾನೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.
ಸದ್ಯ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೃತ ಬಾಲಕನ ಸಹೋದರಿಯೂ ಅಪ್ರಾಪ್ತಳಾಗಿರುವುದರಿಂದ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.








