ಹಾಸನ: ದುಷ್ಕರ್ಮಿಗಳು ಜಮೀನಿನಲ್ಲಿ ಬೆಳೆದು ನಿಂತಿದ್ದ ಸುಮಾರು 70ಕ್ಕೂ ಅಧಿಕ ತೆಂಗಿನ ಮರಗಳನ್ನು ನಾಶ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಮೂರ್ತಿ ಹಾಗೂ ಕುಶಾಲ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ತೆಂಗಿನ ಮರಗಳನ್ನೇ ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಈಗ ಐದು ವರ್ಷಗಳಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನಮರಗಳನ್ನು ಕಳೆದುಕೊಂಡು ರೈತರು (Farmer) ಕಣ್ಣೀರು ಹಾಕುವಂತಾಗಿದೆ.
ಈ ಕುರಿತು ನುಗ್ಗೇಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.