ಬೀದರ್: ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬಸವಕಲ್ಯಾಣ (Basavakalyan) ತಾಲೂಕಿನ ಬಟಗೇರಾವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆ ಮೆರವಣಿಗೆ (Mahalakshmi Jatra procession) ಸಂದರ್ಭದಲ್ಲಿ ಯುವಕರ 2 ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಲಾಟೆ ಬಿಡಿಸಲು ಹೋದ ಪೊಲೀಸರ ಮೇಲೆ ಹಾಗೂ ಪೊಲೀಸ್ ವಾಹನದ ಮೇಲೆ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೆಲವು ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.