ಕಾಂಗ್ರೆಸ್ ಟಿಕೆಟ್ ಪಡೆದ ಮಿಸ್ ಬಿಕಿನಿ ಇಂಡಿಯಾ…!!!
ಲಕ್ನೋ : ಉತ್ತರಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದ್ದೂ ಎಲ್ಲಾ ಪಕ್ಷಗಳು ರಣತಂತ್ರ ಹೆಣೆಯುತ್ತಿದ್ದಾರೆ.. ಇತ್ತೀಚೆಗೆ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ.. ಈ ನಡುವೆ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಆಯ್ಕೆ ಮುಂದುವರೆಸಿದೆ.. ಆದ್ರೆ ಅಚ್ಚರಿ ಎನ್ನುವಂತೆ , ಗ್ಲಾಮರಸ್ ಜಗತ್ತಿನಲ್ಲಿ ಗುರುತಿಸಿಕೊಂಡಿರುವ ಮಿಸ್ ಬಿಕಿನಿ ಇಂಡಿಯಾ ಫೇಮ್ ಅರ್ಚನಾ ಗೌತಮ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ..
ಇವರು ಮೀರತ್ನÀ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆದ್ರೆ ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗಳು , ವ್ಯಂಗ್ಯಾತ್ಮಕ ಮೀಮ್ಸ್ ಗಳು ಹರಿದಾಡ್ತಿದ್ದು, ಇದಕ್ಕೆ ಅರ್ಚನಾ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ..
ಚುನಾವಣಾ ಅಭ್ಯರ್ಥಿ ಎಂದು ಸುದ್ದಿಯಾದಾಗಿನಿಂದಲೂ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನನ್ನ ಎರಡು ಪ್ರೋಪೆಷನ್ ಪರಸ್ಪರ ಬೆಸೆಯಬೇಡಿ ಎಂದು ಅರ್ಚನಾ ಗೌತಮ್ ಮನವಿ ಮಾಡಿದ್ದಾರೆ.
ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅರ್ಚನಾ, ಜನರು ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ಮಾಡೆಲಿಂಗ್ ವೃತ್ತಿಯನ್ನು ಬೆರೆಸಬಾರದು ಎಂದು ಹೇಳಿದ್ದಾರೆ. 2018ರಲ್ಲಿ ಮಿಸ್ ಉತ್ತರ ಪ್ರದೇಶ ಪ್ರಶಸ್ತಿ ವಿಜೇತೆಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗ್ರ್ಯಾಂಡ್ ಮಸ್ತಿ ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಅರ್ಚನಾ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನು ಗೆದ್ದಿದ್ದಾರೆ ಮತ್ತು ಮಿಸ್ ಕಾಸ್ಮೋಸ್ ವರ್ಲ್ಡ್ 2018ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಸ್ತುತ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ..








