ಲಕ್ನೋ: ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಹತ್ತಿರ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಪತಿಯೇ ಆರೋಪಿ ಎನ್ನಲಾಗಿದೆ.
ಆರೋಪಿ ವಿಮಲ್ ಸೋನಿ, ಗ್ರೀನ್ ಪಾರ್ಕ್ ಪ್ರದೇಶದಲ್ಲಿ ಜಿಮ್ ತರಬೇತುದಾರನಾಗಿದ್ದ. ಸರ್ಕಾರಿ ಅಧಿಕಾರಿಗಳಿಗೆ ಮಂಜೂರು ಮಾಡಿದ ಬಂಗಲೆಗಳನ್ನು ಒಳಗೊಂಡಿರುವ ಪ್ರದೇಶದಲ್ಲಿ ಉದ್ಯಮಿಯ ಪತ್ನಿಯ ಶವವನ್ನು ಹೂತಿಟ್ಟಿದ್ದಾಗಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ.
ಜೂನ್ 24 ರಂದು ಮಹಿಳೆ ನಾಪತ್ತೆಯಾಗಿದ್ದರು. ನಂತರ ತನಿಖೆ ನಡೆಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಆರೋಪಿಗೆ ವಿವಾಹ ನಿಶ್ಚಯವಾಗಿದ್ದ ಬಗ್ಗೆ ಮಹಿಳೆ ಅಸಮಾಧಾನಗೊಂಡಿದ್ದಳು. ಕೊಲೆಯಾದ ದಿನ ಮಹಿಳೆ ಜಿಮ್ ಗೆ ಬಂದಿದ್ದಳು. ಈ ವೇಶೆ ಆರೋಪಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಆಗ ಇಬ್ಬರ ಮಧ್ಯೆ ಜಗಳವಾಗಿದೆ. ಆಗ ಆರೋಪಿಯು ಮಹಿಳೆಯ ಕುತ್ತಿಗೆಗೆ ಗುದ್ದಿದ್ದಾನೆ. ಪೆಟ್ಟಿನಿಂದ ಆಕೆ ಮೂರ್ಛೆ ಹೋಗಿದ್ದಾಳೆ. ನಂತರ ಕೊಲೆ ಮಾಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.








