ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

Shwetha by Shwetha
July 1, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ ನಿರ್ಧಾರವನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯಲ್ಲಿ ಅವರು ಸಾರ್ವಜನಿಕರಿಗೆ ಒಂದು ವಿಶೇಷ ಆಫರ್ ನೀಡಿದ್ದಾರೆ.

ಯಾರೇ ಆಗಲಿ ಮಾದಕ ವಸ್ತುಗಳ ಮಾರಾಟ ಅಥವಾ ಸೇವನೆ ಬಗ್ಗೆ ನಿಖರ ಮಾಹಿತಿ ನೀಡಿದರೆ ಅಂತಹವರಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ಬಹುಮಾನ ನೀಡಲಾಗುವುದು. ಈ ಪ್ರಕ್ರಿಯೆಯಲ್ಲಿ ಮಾಹಿತಿ ನೀಡಿದವರ ಹೆಸರನ್ನು ಅತ್ಯಂತ ಗೌಪ್ಯವಾಗಿಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಸಮಾಜದ ಈ ದೊಡ್ಡ ಪಿಡುಗನ್ನು ತೊಲಗಿಸಲು ಕೇವಲ ಪೊಲೀಸರಿಂದ ಸಾಧ್ಯವಿಲ್ಲ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಯುವಜನತೆ ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

Related posts

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026
ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

July 1, 2026

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬರೋಬ್ಬರಿ 89 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ. ಈ ಸಾಧನೆಗೆ ಕಾರಣರಾದ ಇಡೀ ಪೊಲೀಸ್ ತಂಡಕ್ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಪೋಷಕರಿಗೆ ಎಚ್ಚರಿಕೆ ನೀಡಿರುವ ಅವರು ಮಕ್ಕಳ ದುರಭ್ಯಾಸಗಳನ್ನು ಗೌರವದ ಹೆಸರಿನಲ್ಲಿ ಮುಚ್ಚಿಡಬೇಡಿ. ನೀವು ಮುಚ್ಚಿಟ್ಟಷ್ಟು ಅವರ ಜೀವನ ಹಾಳಾಗುತ್ತದೆ. ಪೊಲೀಸರನ್ನು ವಿಶ್ವಾಸಕ್ಕೆ ಪಡೆದು ನಿಮ್ಮ ಮಕ್ಕಳನ್ನು ಈ ವ್ಯಸನದಿಂದ ಮುಕ್ತಗೊಳಿಸಿ ಎಂದು ಕಿವಿಮಾತು ಹೇಳಿದ್ದಾರೆ.

ಇತ್ತೀಚೆಗೆ ಪಾನ್ ಮಸಾಲಾ ಮತ್ತು ಗುಟ್ಕಾಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಿ ಮನೆ ಮನೆಗೆ ತಲುಪಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ. ಶಾಲೆ ಮತ್ತು ಕಾಲೇಜುಗಳಲ್ಲಿ ಈಗಾಗಲೇ ಸ್ಟೂಡೆಂಟ್ ಪೊಲೀಸಿಂಗ್ ವ್ಯವಸ್ಥೆ ಜಾರಿಯಲ್ಲಿದ್ದು ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಧ್ವನಿ ಎತ್ತಬೇಕು ಎಂದು ಅವರು ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯದ ಹಿತದೃಷ್ಟಿಯಿಂದ ನಶೆ ಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಲಿ ಎಂಬುದು ಸರ್ಕಾರದ ಆಶಯವಾಗಿದೆ.

ShareTweetSendShare
Join us on:

Related Posts

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram