ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.
ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40 ಕ್ಷೇತ್ರಗಳಿಗೆ ಮತದಾನ ಜರುಗಿತ್ತು. ಹಿಂದಿನ ಚುನಾವಣೆಯಲ್ಲಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ ಬಾರಿ ಅರ್ಧದಷ್ಟು ದಾಟಲು ಒದ್ದಾಡುತ್ತದೆ ಎಂದು ಸಮೀಕ್ಷೆ ತಳಿಸಿದ್ದವು. ಸದ್ಯ ZPM 11 ಸ್ಥಾನಗಳಲ್ಲಿ, MNF 8 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಎಂಎನ್‌ಎಫ್ 26 ಸ್ಥಾನಗಳನ್ನು ಗೆದ್ದು ಅಧಿಕಾರ ರಚಿಸಿತ್ತು. ZPM ಎಂಟು ಸ್ಥಾನಗಳನ್ನು ಗೆದ್ದಿದ್ದರೆ ಮತ್ತು ಕಾಂಗ್ರೆಸ್ ಐದು ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿತ್ತು. ಬಿಜೆಪಿ ಒಂದು ಸ್ಥಾನ ಗೆದ್ದಿತ್ತು.