ಬೆಂಗಳೂರು : ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಎಂ.ಜೆ.ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ದೇವೇಗೌಡ, ನಮ್ಮ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಹಾಗೂ ನನ್ನ ಆತ್ಮೀಯರೂ ಆದ ಅಪ್ಪಾಜಿ ಗೌಡ ಅವರ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ. ನಮ್ಮ ಪಕ್ಷಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಗೆ ತುಂಬಲಾಗದ ನಷ್ಟವುಂಟಾಗಿದೆ. ನಾವೆಲ್ಲಾ ಈ ದಿನ ಒಬ್ಬ ಧೈರ್ಯವಂತ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ.ಅಪ್ಪಾಜಿ ಗೌಡ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








