ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ.
ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಿದ ಅವರು, ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಅಲ್ಪಸಂಖ್ಯಾತ ಸಮುದಾಯದ ಶಾಸಕರಾಗಿದ್ದರೂ, ಸೌಹಾರ್ದತೆಯ ಸಂಕೇತವಾಗಿ ನಗರದ 16 ದೇವಾಲಯಗಳಿಗೆ ಮಡಿಲಕ್ಕಿ ಸಮರ್ಪಿಸುವ ಸಂಪ್ರದಾಯವನ್ನು ಮುಂದುವರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕರಗ ಮಹೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಟ ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಮತ್ತು ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ.





