ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ(KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ದ ಅಧ್ಯಕ್ಷರಾಗಿದ್ದು, ಅವರಿಗೆ ಸೇರಿದ್ದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಕೊಮ್ಮನಹಳ್ಳಿ ಗ್ರಾಮದಲ್ಲಿನ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ಅವರ ಆಪ್ತರ ಮನೆಯ ಮೇಲೆ ಕೂಡ ದಾಳಿ ನಡೆದಿದೆ. ಒಟ್ಟು 10 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.