ಬೆಂಗಳೂರು: ಜಾತಿನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.
ಹೊರ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು (kaggalipura Police) ಶುಕ್ರವಾರ ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ.
ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ. 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಗಿದೆ.
ಮಾರ್ಗಮಧ್ಯದಲ್ಲೇ ವೈದ್ಯಕೀಯ ತಪಾಸಣೆ ಮುಗಿದ ನಂತರ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿದ್ದಾರೆ. ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.