ಚಿತ್ರದುರ್ಗ: ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಶಾಸಕಿ ಪೂರ್ಣಿಮಾ ಅವರೇ ತಮ್ಮ ಫೆಸ್ ಬುಕ್ ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದ ಶಾಸಕಿ ಕೊರೊನಾ ಪರೀಕ್ಷಗೆ ಒಳಗಾದ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆ ಪೂರ್ಣಿಮಾ ಅವರು ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.








