ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ MLA Satish Reddy saaksha tv
ಬೆಂಗಳೂರು : ಶಾಸಕ ಸತೀಶ್ ರೆಡ್ಡಿ ಅವರ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ನಾಲ್ವರು ಕಿಡಿಗೇಡಿಗಳು ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾರೆ.
ಇದರಿಂದ ಕಾರುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ದುಷ್ಕರ್ಮಿಗಳು ಮನೆಯ ಹಿಂಬದಿ ಗೇಟ್ ನಿಂದ ಎಂಟ್ರಿ ಕೊಟ್ಟಿದ್ದು, ಸಿಸಿ ಟಿವಿಯನ್ನು ಮರೆಮಾಚಿ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾಸ್ಥಳಕ್ಕೆ ಬೊಮ್ಮನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.










