ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ (S Suresh Kumar) ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಸುರೇಶ್ ಕುಮಾರ್ ಅವರನ್ನು ಬೆಂಗಳೂರು (Bengaluru) ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಶಾಸಕರ ಐಸಿಯುಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಲ್ಲದೇ, ಅವರ ಮೆದುಳಿಗೆ ಜ್ವರ ತಗುಲಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್ಕುಮಾರ್ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಭಾಗಿಯಾಗಿದ್ದರು. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.
ಆದರೆ, ಮಂಗಳವಾರ ರಾತ್ರಿ ತೀವ್ರ ಜ್ವರದಿಂದ ಬಳಲಿದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.