ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುತ್ತೆ ಎಂಬ ಮಾಹಿತಿ ಹೊರಬೀಳುತ್ತಿದಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಇನ್ನೊಂದೆಡೆ ಕೊರೊನಾ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಉತ್ತರ ಕರ್ನಾಟಕ ಭಾಗದ ಶಾಸಕರು ಸರ್ಕಾರದ ವಿರುದ್ಧ ಬಂಡಾಯದ ಭಾವುಟ ಹಾರಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಉಮೇಶ್ ಕತ್ತಿ ಯಡಿಯೂರಪ್ಪ ಅವರ ಸರ್ಕಾರದ ವಿರುದ್ದ ಬಂಡಾಯದ ಭಾವುಟ ಹಾರಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರ್ವಕವೆಂಬಂತೆ ಶಾಸಕ ಉಮೇಶ್ ಕತ್ತಿ ಅವರ ನಿವಾಸದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಸೇರಿ ಸಭೆ ನಡೆಸಿದ್ದಾರೆ. ಈ ಬಗ್ಗೆ ಶಾಸಕ ಉಮೇಶ್ ಕತ್ತಿ ಅವರನ್ನು ಕೇಳಿದರೇ ನಮ್ಮ ಭಾಗದ ಶಾಸಕರನ್ನು ಕರೆದು ಊಟ ಹಾಕಿದ್ದೇನೆ. ತುಂಬ ದಿನಗಳು ಆಗಿತ್ತು ಭೇಟಿ ಮಾಡಿ. ಹಾಗಾಗಿ ಎಲ್ಲರೂ ಸೇರಿ ಊಟ ಮಾಡಿದ್ದೇವೆ. ಯಾವುದೇ ಬಂಡಾಯವಿಲ್ಲ. ನಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೋತೆ ಇರುತ್ತೇವೆ.
ನಾನು ಮೊನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಔತಣಕೂಟದ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರು ಸಹ ನಾನು ಬರುತ್ತೇವೆ ಎಂದು ಹೇಳಿದರು. ಆಗ ನಾನು ನೀವು ಬನ್ನಿ ಸರ್, ನೀವು ಬಂದರೆ ಇನ್ನೂ ಒಳ್ಳೆಯದೆ ಎಂದು ಹೇಳಿ ಬಂದಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.
ಇದೆ ವೇಳೆ ರಾಜ್ಯಸಭೆಗೆ ತಮ್ಮ ರಮೇಶ್ ಕತ್ತಿ ಅವರನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.