ಕಲಬುರಗಿ: ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಪತ್ನಿ ಜಯಶ್ರೀ ಹೆಸರು ಹೇಳಿ ಬಂದಿದ್ದು, ಶಾಸಕರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಶಾಸಕ ಬಸವರಾಜ ಮತ್ತಿಮೂಡ ಭಾಮೈದ ಗೋರಖನಾಥ್ ಮನೆ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ್ದರು. ಮಹಾರಾಷ್ಟ್ರ ಪೊಲೀಸರ ದಾಳಿ ವೇಳೆ ಬಿಜೆಪಿ ಶಾಸಕ ಮತ್ತಿಮೂಡ ಶಾಸಕರ ಪತ್ನಿ ಜಯಶ್ರೀ ಹೆಸರಿನಲ್ಲಿದ್ದ ಕಾರನ್ನು ಜಪ್ತಿ ಮಾಡಲಾಗಿತ್ತು. ಕ್ರಿಕೆಟ್ ಬೆಟ್ಟಿಂಗ್ ಕೇಸಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, 38.44 ಲಕ್ಷ ನಗದು, ಮತ್ತಿತರ ವಸ್ತು ಜಪ್ತಿ ಮಾಡಿದ್ದರು.
ಕಮಲ ಶಾಸಕರ ರಾಜೀನಾಮೆಗೆ ಆಗ್ರಹ
ಕ್ರಿಕೆಟ್ ಬೆಟ್ಟಿಂಗ್ ಕೇಸಲ್ಲಿ ಕಮಲ ಶಾಸಕರ ಪತ್ನಿ ಹೆಸರಿನಲ್ಲಿದ್ದ ಕಾರು ಜಪ್ತಿ ಮಾಡುತ್ತಿದ್ದಂತೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ನೈತಿಕ ಹೊಣೆ ಹೊತ್ತು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಪ್ರಕರಣದಲ್ಲಿ ಮತ್ತಿಮೋಡ ಶಾಮೀಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಸರ್ಕಾರದ ಕುಮ್ಮಕ್ಕಿನಿಂದ ಕಲಬುರಗಿ ಸೇರಿ ರಾಜ್ಯದ ಹಲವೆಡೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಸಲಾಗುತ್ತಿದೆ. ಸ್ವತಃ ಶಾಸಕ ಮತ್ತಿಮೋಡ ಹಿಂದೆ ನಿಂತು ಬೆಟ್ಟಿಂಗ್ ದಂಧೆ ಮಾಡಿಸುತ್ತಿದ್ದಾರೆ. ಈ ಹಿಂದೆಯೂ ಮತ್ತಿಮೋಡ ಮೇಲೆ ಕ್ರಿಕೆಟ್ ಬೆಟ್ಟಿಂಗ್ ಕೇಸ್ ಗಳಿದ್ದವು. ಜಿಲ್ಲಾ ಪಂಚಾಯಿತಿ ಸದಸ್ಯರಿದ್ದಾಗಲೇ ಈ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರಿಂದ ಹಲವೆಡೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೀಗ ಸೋಲಾಪುರ ಸಿಸಿಬಿ ಪೊಲೀಸರು ದಾಳಿ ಮಾಡಿದ ನಂತರ ಶಾಸಕರ ಅಸಲಿಯತ್ತು ಮತ್ತೊಮ್ಮೆ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಬೆಟ್ಟಿಂಗ್ ದಂಧೆ ನಡೆಯುತ್ತಿದ್ದರೂ ಸ್ಥಳೀಯ ಪೊಲೀಸರು ಸುಮ್ಮನೇ ಕುಳಿತಿರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸ್ಥಳೀಯ ಪೊಲೀಸರಿಂದಲೂ ಬೆಟ್ಟಿಂಗ್ ದಂಧೆಗೆ ಬೆಂಬಲ ಇದೆ ಎನ್ನೋದು ಇದರಿಂದ ಗೊತ್ತಾಗುತ್ತದೆ. ಶಾಸಕ ಕುಮ್ಮಕ್ಕಿನಿಂದ ಬೆಟ್ಟಿಂಗ್ ನಡೀತಿರೋದು ದುರಂತ. ಶಾಸಕರಿಂದ ಗ್ರಾಮೀಣ ಕ್ಷೇತ್ರದ ಜನರು ತಲೆ ತಗ್ಗಿಸುವಂತಾಗಿದೆ. ಯುವ ಸಮುದಾಯ ಬೆಟ್ಟಿಂಗ್ ಜಾಲಕ್ಕೆ ಬಿದ್ದು ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕ ಮತ್ತಿಮೋಡ ವಿರುದ್ಧ ಕ್ರಮ ಕೈಗೊಳ್ಳಬೇಕು. ನೈತಿಕ ಹೊಣೆ ಹೊತ್ತು ಮತ್ತಿಮೋಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡೋದಾಗಿ ಕಾಂಗ್ರೆಸ್ ಮುಖಂಡ ವಿಜಯಕುಮಾರ ಎಚ್ಚರಿಕೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel