ಬೆಂಗಳೂರು: ಮುಡಾ ಹಗರಣ ವಿಚಾರ ಈಗ ಸರ್ಕಾರ (Karnataka Govt.) ಹಾಗೂ ರಾಜ್ಯಪಾಲರ ಮಧ್ಯೆದ ಕುಸ್ತಿಗೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಆರ್ಟಿಕಲ್ 163ರ ಅಡಿ ಮಂತ್ರಿ ಪರಿಷತ್ ಗೆ ಇರುವ ಅಧಿಕಾರ ಬಳಸಿಕೊಂಡಿರುವ ಸಿದ್ದರಾಮಯ್ಯ (Siddaramaiah) ಸಂಪುಟ, ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ, ಬಾಕಿ ಉಳಿದಿರುವ ಪ್ರಕರಣದ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ (CLP Meeting) ಕಾಂಗ್ರೆಸ್ ಶಾಸಕರು, ಸಚಿವರು ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ನೀವು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಕಾನೂನು ಹೋರಾಟ ನಡೆಸಿ ಎಂದು ಶಾಸಕರು ಹೇಳಿದ್ದಾರೆ. ಅಲ್ಲದೇ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಸಿಎಂ ಎಲ್ಲ ಶಾಸಕರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಮಂತ್ರಿ ಪರಿಷತ್ ಸಭೆಯಲ್ಲಿ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ಪೆಂಡಿಂಗ್ ಇರುವ ನಾಲ್ಕು ಪ್ರಕರಣಗಳ ಕುರಿತು ಸೂಕ್ತ ಕ್ರಮ ವಹಿಸುವಂತೆ ಸಲಹೆ ರೂಪದ ನಿರ್ಣಯ ಕೈಗೊಳ್ಳಲಾಗಿದೆ. ಭ್ರಷ್ಟಚಾರ ತಡೆ ಕಾಯ್ದೆ 1988ರ ಅಡಿ ಪ್ರಮುಖ 4 ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. As soon as possible ಪ್ರಾಸಿಕ್ಯೂಷನ್ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಿ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಕರಣ, ಜನಾರ್ದನ ರೆಡ್ಡಿ ಪ್ರಕರಣ, ಮುರುಗೇಶ್ ನಿರಾಣಿ ಪ್ರಕರಣ, ಶಶಿಕಲಾ ಜೊಲ್ಲೆ ಪ್ರಕರಣಗಳ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವಂತೆ ಅರ್ಜಿ ಸಲಹೆ ನೀಡಿ ನಿರ್ಣಯ ಕೈಗೊಳ್ಳಲಾಗಿದೆ.
ಈ ಮೂಲಕ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರಿಗೆ ತಕ್ಕ ಉತ್ತರ ನೀಡಲು ಸಿದ್ದರಾಮಯ್ಯ ಕ್ಯಾಬಿನೆಟ್ ಯತ್ನಿಸುತ್ತಿದೆ. ಆದರೆ, ಆಗಸ್ಟ್ 1ರಂದು ಸಿಎಂ ಅನುಪಸ್ಥಿತಿಯಲ್ಲಿ ತೆಗೆದುಕೊಂಡಿದ್ದ ರಾಜ್ಯಪಾಲರು ಡೋಂಟ್ ಕೇರ್ ಅಂದಿದ್ದರು. ಈಗ ಈ ನಿರ್ಣಯಕ್ಕೆ ಏನು ಹೇಳುತ್ತಾರೆ ನೋಡಬೇಕಿದೆ.








