ತೆಲಂಗಾಣ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಅವರ ಕಾರಿನ ಸ್ಫೋಟಗೊಂಡಿದೆ.
ಉಡುಪಿಯ ಕಾರ್ಕಳ ತಾಲೂಕಿನ ಮಿಯ್ಯಾರು ಸೇತುವೆ ಹತ್ತಿರ ವೇಗವಾಗಿ ಸಾಗುತ್ತಿದ್ದಾಗ ಕಾರಿನ ಟಯರ್ ಸ್ಫೋಟಗೊಂಡಿದೆ. ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಟಯರ್ ಸ್ಫೋಟಗೊಳ್ಳುತ್ತಿದ್ದಂತೆ ಕಾರು ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








