ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿ ಪುತ್ರನ ಬೈಕ್ ಅಪಘಾತವಾಗಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಶಾಸಕರ ಪುತ್ರ(19) ಹೇಮಂತ್ ಗೆ ಗಾಯಗಳಾಗಿವೆ.
ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹೇಮಂತ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಕಾಲಿಗೆ ಸಣ್ಣು ಪುಟ್ಟಗಾಯಳಾಗಿವೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳಂದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.