ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ ಗಸ್ತಿಯವರ ತಾಯಿ 75 ವರ್ಷದ ಯಂಕಮ್ಮ ಗಸ್ತಿ ಅವರು ಇಂದು ವಿಧಿವಶರಾಗಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿನ ತಮ್ಮ ನಿವಾಸದಲ್ಲಿ ಅಚಾನಕ್ ಆಗಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಯಂಕಮ್ಮ ಗಸ್ತಿಯವರು ಕೊನೆಯುಸಿರೆಳೆದಿದ್ದಾರೆ. ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಶೋಕ ಗಸ್ತಿ ಅವರು ತಕ್ಷಣವೇ ದೆಹಲಿಯಿಂದ ಲಿಂಗಸುಗೂರಿಗೆ ದೌಡಾಯಿಸಿ ತಾಯಿಯ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಇನ್ನೂ ಇತ್ತೀಚೆಗೆ ನಡೆದ ಅಶೋಕ ಗಸ್ತಿಯವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಯಂಕಮ್ಮ ಅವರನ್ನು ದೆಹಲಿಗೆ ಕರೆದೊಯ್ಯಲು ಗಸ್ತಿಯವರು ನಿರ್ಧರಿಸಿದ್ರು. ಆದ್ರೆ ಕೊರೊನಾ ನಿಯಮದಂತೆ 60 ವರ್ಷ ಮೇಲ್ಪಟ್ಟವರ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದ ಪರಿಣಾಮ ಮನೆಯಲ್ಲಿಯೇ ಸಿಹಿ ಹಂಚಿ ಪುತ್ರನ ಸಂಭ್ರಮದಲ್ಲಿ ಭಾಗಿಯಾಗಿದ್ರು.
ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್
ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ....