ಕಲಬುರಗಿ: ವಿಧಾನಪರಿಷತ್ತಿನ 7 ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ತಗ್ಗಂಟಾಗಿರುವ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೋತವರಿಗೂ ಟಿಕೆಟ್ ನೀಡಬೇಕೆಂಬ ಒತ್ತಡ ಹೆಚ್ಚುತ್ತಿದೆ. ಬಿಜೆಪಿ ಬಂದು ಸರ್ಕಾರ ರಚನೆಗೆ ಕಾರಣರಾದವರಿಗೆ ಟಿಕೇಟ್ ಕೊಡುವಂತೆ ಕೇಳಿದ್ದೇವೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂಬ ಭರವಸೆಯಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವು, ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಹಾಗಾಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಎಂಎಲ್‌ಸಿ ಟಿಕೆಟ್ ಕೊಡುವಂತೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಿದ್ದೇವೆ. ಸೋತವರಿಗೆ ವಿಧಾನ ಪರಿಷತ್ ಸ್ಥಾನ ನೀಡುತ್ತಾರೆಂಬ ಭರವಸೆ ಎಂದಿದ್ದಾರೆ.








