ಬಾಲಕಿಯನ್ನು ಚುಡಾಯಿಸಿದವವನ್ನು ಪ್ರಶ್ನಿಸಿದಕ್ಕೆ ಕೊಲೆಯಾದ ನಟ..!
ಹರಿಯಾಣ : ಬಾಲಕಿಯೊಬ್ಬಳಿಗೆ ಕಿರುಕುಳ ಕೊಡುತ್ತಿದ್ದ ಕಾಮುಕ ಯುವಕನಿಗೆ ಬುದ್ಧಿ ಹೇಳಲು ಹೋದವನನ್ನು ಇರಿದು ಕೊಲೆ ಮಾಡಲಾಗಿರುವ ಘಟನೆ ಹರಿಯಾಣದ ರೋಹ್ಟಕ್ ನಗರದಲ್ಲಿ ನಡೆದಿದೆ.
ಮಾಡೆಲ್ ಮತ್ತು ನಟ ಹಾಗೂ ಬಾಕ್ಸರ್ ಆಗಿದ್ದ 24 ವರ್ಷದ ಕಾಮೇಶ್ ಎಂಬುವಾತ ಮೃತ ದುರ್ದೈವಿಯಾಗಿದ್ದಾನೆ. ರೋಹ್ಟಕ್ನ ತೇಜ್ ಕಾಲನಿಯಲ್ಲಿ ವಾಸಿಸುತ್ತಿದ್ದ ಕಾಮೇಶ್, ಅದೇ ಪ್ರದೇಶದ ನಿವಾಸಿಯಾಗಿದ್ದ 12 ವರ್ಷದ ಬಾಲಕಿಯೊಬ್ಬಳನ್ನು ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದವನಿಗೆ ಎಚ್ಚರಿಕೆ ನೀಡಿದ್ದಾನೆ..
ಈ ವೇಳೆ ಏಕಾಏಕಿ ಕಾಮೇಶ್ ಗೆ ಚಾಕುವಿಂದ ಹಲವು ಬಾರಿ ಇರಿದಿದ ಕಾಮುಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.. ಇತ್ತ ಗಂಭೀರವಾಗಿ ಗಾಯಗೊಂಡ ಕಾಮೇಶ್ನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಪ್ಪಿದ್ದಾನೆ. ರೋಹ್ಟಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.