Kamegowda | ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ಇನ್ನಿಲ್ಲ
ಮಂಡ್ಯ : ಆಧುನಿಕ ಭಗೀರಥ ಖ್ಯಾತಿಯ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯ ಕೆರೆ ಕಾಮೇಗೌಡ ಇಂದು ಕೊನೆಯುಸಿರೆಳೆದಿದ್ದಾರೆ.
ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಶಾಲೆಯ ಮಟ್ಟಿಲೇರದ ಕಾಮೇಗೌಡರು ತಮಗಿದ್ದ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರವಾಗಿದ್ದು ಮಾತ್ರವಲ್ಲದೇ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು.

ಕುಂದೂರು ಬೆಟ್ಟದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಉಪಯೋಗವಾಗಲಿ ಎಂದು ಕಾಮೇಗೌಡ ಅವರು ತಮ್ಮ ಕೈಯಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.
ಹಾಗೇ ಸಾವಿರಾರು ಗಿಡಗಳನ್ನು ನೆಟ್ಟಿದ್ದರು. ಕಾಮೇಗೌಡರ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಮಾಡಿ ಹೊಗಳಿದ್ದರು.
ಕಾಮೇಗೌಡರ ಕೆಲಸವನ್ನು ಗುರುತಿಸಿ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ.