Modi | ಆಮ್ ಆದ್ಮಿ ಪಾರ್ಟಿ ಕಾಂಗ್ರೆಸ್ ನ ಜೆರಾಕ್ಸ್ : ಮೋದಿ modi-aam-aadmi-xerox-copy-of-congress saaksha tv
ಚಂಡೀಗಢ : ಆಮ್ ಆದ್ಮಿ ಪಕ್ಷವೂ ಕಾಂಗ್ರೆಸ್‍ನ ಜೆರಾಕ್ಸ್ ಕಾಪಿ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚುನಾವಣಾ ಅಖಾಡಕ್ಕೆ ಧುಮುಕ್ಕಿದ್ದರು.
ಇಂದು ಫಾಜಿಲ್ಕಾ ಜಿಲ್ಲೆಯಲ್ಲಿ ಅಬೋಹರ್ ನಗರದಲ್ಲಿ ಮಾತನಾಡಿದ ನರೇಂದ್ರ ಮೋದಿ, ಆಪ್ ಪಕ್ಷವನ್ನು ಕಾಂಗ್ರೆಸ್ ನ ಕಾಪಿ ಎಂದು ಟೀಕಿಸಿದರು.
ಅಲ್ಲದೇ ಈ ಎರಡೂ ಪಕ್ಷಗಳು ಭ್ರಷ್ಟಾಚಾರದ ಪಾಲುದಾರರು. ಪಂಜಾಬ್ ಲೂಟಿ ಮಾಡುತ್ತಿದ್ದರೇ ಮತ್ತೊಬ್ಬರು ದೆಹಲಿಯಲ್ಲಿ ಲೂಟಿ ಆರಂಭಿಸಿದ್ದಾರೆ ಎಂದು ಕೆಂಡಕಾರಿದರು.
ಅಂದಹಾಗೆ ಪಂಜಾಬ್ ನಲ್ಲಿ ಸದ್ಯ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನೇರ ಪೈಪೋಟಿ ನಡೆಸುತ್ತಿದೆ.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಪ್ ಗೆ ಜನರು ಸಂಪೂರ್ಣ ಬೆಂಬಲ ನೀಡಿದ್ದರು.
ಪಕ್ಷವನ್ನು ಎರಡನೇ ಸ್ಥಾನದಲ್ಲಿ ಕೂರಿಸಿದ್ದರು. ಹೀಗಾಗಿ ಈ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ.









