ಮೋದಿ ಸಲಹೆಗಾರ ಅಮರ್‍ಜೀತ್ ಸಿನ್ಹಾ ರಾಜೀನಾಮೆ Amarjeet Sinha
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರ ಅಮರ್‍ಜೀತ್ ಸಿನ್ಹಾ ರಾಜೀನಾಮೆ ನೀಡಿದ್ದಾರೆ.
ಕಳೆದ ವರ್ಷ 1983 ರ ಬ್ಯಾಚ್ ಬಿಹಾರ ಕೇಡರ್ ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿದ್ದ ಸಿನ್ಹಾ ಅವರನ್ನು ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಧಾನಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಆದ್ರೆ ಇವತ್ತು ಅವರು ರಾಜೀನಾಮೆ ನೀಡಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಸಿನ್ಹಾ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಮತ್ತೊಬ್ಬ ಪ್ರಮುಖ ಅಧಿಕಾರಿ ಭಾಸ್ಕರ್ ಖುಲ್ಬೆ ಅವರೊಂದಿಗೆ ಸಲಹೆಗಾರರಾಗಿ ನೇಮಕಗೊಂಡರು.
ಮೂರು ದಶಕಗಳ ತಮ್ಮ ವೃತ್ತಿಜೀವನದಲ್ಲಿ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವಾಲಯದಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಮಾರ್ಚ್ ನಲ್ಲಿ ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಪಿಕೆ ಸಿನ್ಹಾ ಅವರು ರಾಜೀನಾಮೆ ನೀಡಿದ್ದರು. ಇದೀಗ ಪ್ರಧಾನಿಗಳ ಸಲಹೆಗಾರ ಅಮರ್ ಜೀತ್ ಸಿನ್ಹಾ ಕೂಡ ರಾಜೀನಾಮೆ ನೀಡಿದ್ದಾರೆ.









