Modi
ನವದೆಹಲಿ: ಕಾಂಗ್ರೆಸ್ ಬಿಜೆಪಿ ಗೆ ಪ್ರತಿಷ್ಠಿಯ ಕಣವಾಗಿ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದ ಉಪಸಮರದಲ್ಲಿ ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಆರ್ ಆರ್ ನಗರದಲ್ಲಿ ಮುನಿರತ್ನ, ಶಿರಾದಲ್ಲಿ ರಾಜೇಶ್ ಗೌಡ ಅವರು ಬಹು ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇತ್ತ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ವಿಶೇಷ ಅಂದ್ರೆ ಅಮಿತ್ ಶಾ ಹಾಗೂ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದು, ರಾಜ್ಯದ ಬಿಜೆಪಿ ಕಾರ್ಯಕರ್ತರು ಬೆಂಬಲಿಗರ ಖುಷಿ ಡಬಲ್ ಆಗಿದೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ‘ ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ ಎಂದಿದ್ದಾರೆ.
ಇನ್ನೂ ಗೃಹ ಸಚಿವ ಅಮಿತ್ ಶಾ ಅವರು ‘ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದ್ಯ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿತ್ತು. ಆದ್ರೆ ಬಿಜೆಪಿ ಮುಂದೆ ಕಾಂಗ್ರೆಸ್ ಹೀನಾಯವಾಗಿ ನೆಲಕಚ್ಚಿದ್ರೆ, ಜೆಡಿಎಸ್ ಧೂಳಿಪಟವಾಯ್ತು. ಇನ್ನೂ ಇದರಿಂದಾಗಿ ಡಿಕೆಶಿ ವರ್ಚಸ್ಸು ಸಹ ವರ್ಕೌಟ್ ಆಗಿಲ್ಲ ಅನ್ನೋದು ಸಾಬೀತಾಯ್ತು. ಸದ್ಯ ಬಂಡೆಯ ಮಾಸ್ಟರ್ ಪ್ಲಾನ್ ತಲೆಗೆಳಗಾಗಿದ್ದು,ಕಾಂಗ್ರೆಸ್ ಹೀನಾಯ ಸೋಲನುಭವಿಸಿದೆ.
Modi
ಜನರ ತೀರ್ಪಿಗೆ ತಲೆಬಾಗಿದ್ದೇನೆ : ಮಾಜಿ ಸಿಎಂ ಕುಮಾರಸ್ವಾಮಿ
‘ಇವಿಎಂ’ನತ್ತ ಬೊಟ್ಟು ಮಾಡುವುದನ್ನ ಬಿಡಿ : ‘ಕೈ’ ನಾಯಕರಿಗೆ ಕಾರ್ತಿ ಚಿದಂಬರಂ ಬುದ್ದಿವಾದ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel