ಮೋದಿ ಸಂಪುಟಕ್ಕೆ ಸರ್ಜರಿ : ಡಿವಿಎಸ್ ಗೆ ಕೋಕ್..? ರಾಜ್ಯದ ಇಬ್ಬರಿಗೆ ಅವಕಾಶ
ನವದೆಹಲಿ : ಮುಂದಿನ ತಿಂಗಳ ಮೊದಲ ವಾರದಲ್ಲಿ ನರೇಂದ್ರ ಮೋದಿ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಗಳಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಈ ಬಾರಿ ಒಟ್ಟು 27 ಮಂದಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು, ಈ ಪೈಕಿ ರಾಜ್ಯದ ಇಬ್ಬರ ಹೆಸರು ಮಂತ್ರಿ ರೇಸ್ ನಲ್ಲಿದೆ.
ಮುಖ್ಯವಾಗಿ ಹಾಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಕೈ ಬಿಡುವ ಸಾಧ್ಯತೆಗಳಿದ್ದು, ಅವರ ಸ್ಥಾನಕ್ಕೆ ಅದೇ ಸಮುದಾಯಕ್ಕೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ.
ಡಿವಿಎಸ್ ಸ್ಥಾನಕ್ಕೆ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಮೈಸೂರಿನ ಪ್ರತಾಪ್ ಸಿಂಹ ಹೆಸರು ಮುನ್ನೆಲೆಗೆ ಬಂದಿದೆ.
ಇನ್ನು ಈಗಾಗಲೇ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿಯವರು ನಿಧನರಾದ ಹಿನ್ನೆಲೆಯಲ್ಲಿ ಒಂದು ಸ್ಥಾನ ಖಾಲಿಯಾಗಿದೆ.
ಈ ಸ್ಥಾನಕ್ಕೆ ಇಬ್ಬರು ಲಿಂಗಾಯತ ಸಂಸದರ ಹೆಸರು ಸ್ಪರ್ಧೆಯಲ್ಲಿದೆ. ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಶಿವಮೊಗ್ಗ ಸಂಸದ ರಾಘವೇಂದ್ರ ಅವರಿಗೆ ಮಂತ್ರಿಪಟ್ಟಸ್ಥಾನ ಸಿಗುವ ಸಾಧ್ಯತೆಗಳಿವೆ.