ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಸಾಧನೆ ಕೊಂಡಾಡಿದ್ದಾರೆ. 110 ದಿನಗಳ ಸುದೀರ್ಘ ಪ್ರಯಾಣದ ನಂತರ ಇಸ್ರೋ ಆದಿತ್ಯ ಎಲ್1 (Aditya-L1) ನೌಕೆ ಬರೋಬ್ಬರಿ 15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಹೀಗಾಗಿ ಭಾರತಕ್ಕೆ ಸೂರ್ಯನ ಅಧ್ಯಯನ ಇಸ್ರೋ ಆರಂಭಿಸಲು ಅನುಕೂಲಕರ ವಾತಾವರಣ ನಿರ್ಮಾಣವಾದಂತಾಗಿದೆ. ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಸೆ. 2ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್ಗಳೊಂದಿಗೆ ಉಡಾವಣೆ ಮಾಡಲಾಗಿತ್ತು. ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ (Space) ನೌಕೆ ಕಳುಹಿಸಲಾಗಿತ್ತು. ಹೀಗಾಗಿ ಇಂದು ಬೆಳಿಗ್ಗೆಯಿಂದಲೇ ಹಾಲೋ ಆರ್ಬಿಟ್ ಅಳವಡಿಕೆಯ ಕಾರ್ಯವನ್ನು ಮುಂದುವರಿಸಿ ಲಗ್ರೇಂಜ್ ಪಾಯಿಂಟ್-1 ರಲ್ಲಿ ಇರಿಸಲು ಆರಂಭಿಸಲಾಗಿತ್ತು. ಅಂದುಕೊಂಡಂತೆ ಆದಿತ್ಯ ಎಲ್-1 ನೌಕೆಯು ನಿಗದಿತ ಕಕ್ಷೆ ತಲುಪಿದೆ. ಈ ಮೂಲಕ 2023ರ ಚಂದ್ರಯಾನ-3 ಯಶಸ್ವಿ ಬಳಿಕ ಇಸ್ರೋ (ISRO) ಸ್ಥಾಪಿಸಿದ ಮಹತ್ವದ ಮೈಲುಗಲ್ಲು ಇದಾಗುವಂತಾಗಿದೆ.
1960ರಲ್ಲಿ ಅಮೆರಿಕ ನಾಸಾ ಕೈಗೊಂಡಿದ್ದ ಪಯೋನಿರ್-5 ಮೊಟ್ಟ ಮೊಲದ ಸೂರ್ಯನ ಅನ್ವೇಷಣೆಯಾಗಿತ್ತು. ಈವರೆಗೆ ಒಟ್ಟು 14 ಬಾರಿ ಸೂರ್ಯನ ಅನ್ವೇಷಣೆಗಳನ್ನ ಕೈಗೊಂಡಿದೆ.