ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೇರಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಹೀಗಾಗಿ ರಾಷ್ಟ್ರಪತಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತ ಟ್ವೀಟ್ ಮಾಡಿರುವ ಪ್ರಧಾನಿ, ರಾಷ್ಟ್ರಪತಿಯಾಗಿ ಒಂದು ವರ್ಷ ಪೂರೈರಿಸಿರುವ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು, ಅವಿರತ ಪರಿಶ್ರಮ, ಸಾರ್ವಜನಿಕ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಳ್ಳುವ ಪರಿ ಅವರ ನಾಯಕತ್ವವನ್ನು ಪ್ರತಿ ಬಿಂಬಿಸುತ್ತದೆ ಎಂದು ಹೇಳಿದ್ದಾರೆ.
2022ರ ಜುಲೈ 25ರಂದು ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಆದಿವಾಸಿ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದರು.