ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು ಆದರೆ ಇದೀಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಹೆಸರಿನಲ್ಲೇ ಮತ್ತೊಂದು ಮಹತ್ವದ ಯೋಜನೆಯನ್ನು ಘೋಷಿಸುವ ಮೂಲಕ ವಿಪಕ್ಷಗಳಿಗೆ ರಾಜಕೀಯ ತಿರುಗೇಟು ನೀಡಿದ್ದಾರೆ
ಗ್ರಾಮೀಣ ಭಾರತದ ಆರ್ಥಿಕತೆಗೆ ಬಲ ತುಂಬುವ ನಿಟ್ಟಿನಲ್ಲಿ ಮತ್ತು ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಖಾದಿ ಕೈಮಗ್ಗ ಮತ್ತು ಕರಕುಶಲ ವಲಯಕ್ಕಾಗಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಜಾರಿಗೆ ತರುವುದಾಗಿ ಸರ್ಕಾರ ಘೋಷಿಸಿದೆ
ವಿವಾದಕ್ಕೆ ತೆರೆ ಎಳೆಯುವ ತಂತ್ರ
ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯನ್ನು ಮಾರ್ಪಡಿಸಿ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ ವಿಬಿ ಜೆ ರಾಮ್ ಜಿ ಎಂದು ಮರುನಾಮಕರಣ ಮಾಡಿತ್ತು ದಶಕಗಳ ಇತಿಹಾಸವಿರುವ ಯೋಜನೆಯಿಂದ ಗಾಂಧೀಜಿ ಹೆಸರನ್ನು ಅಳಿಸಿಹಾಕುವ ಪ್ರಯತ್ನ ಇದಾಗಿದೆಯೆಂದು ಕಾಂಗ್ರೆಸ್ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದ್ದವು ಈ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಗಾಂಧಿ ಹೆಸರಿನ ಹೊಸ ಯೋಜನೆ ಘೋಷಣೆಯಾಗಿರುವುದು ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ
ಏನಿದು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ
ಈ ಯೋಜನೆಯು ಪ್ರಮುಖವಾಗಿ ಗ್ರಾಮೀಣ ಗುಡಿ ಕೈಗಾರಿಕೆಗಳನ್ನು ಉತ್ತೇಜಿಸಲಿದೆ ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆಗೆ ಆಧುನಿಕ ಸ್ಪರ್ಶ ನೀಡುವುದು ತರಬೇತಿ ಮತ್ತು ಕೌಶಲಾಭಿವೃದ್ಧಿಯ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಇದರ ಮೂಲ ಉದ್ದೇಶವಾಗಿದೆ
ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆಯ ಅಡಿಯಲ್ಲಿ ಈ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಇದು ಕೇವಲ ಹೆಸರಿಗಷ್ಟೇ ಸೀಮಿತವಾಗದೆ ಗ್ರಾಮೀಣ ಭಾಗದ ನೇಕಾರರು ಮತ್ತು ಕುಶಲಕರ್ಮಿಗಳ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸುವ ಬೃಹತ್ ಗುರಿಯನ್ನು ಹೊಂದಿದೆ ಎಂದು ಸಚಿವರು ವಿವರಿಸಿದ್ದಾರೆ
ಗ್ರಾಮೀಣ ಜನರ ಜೀವನಶೈಲಿಯನ್ನು ಬದಲಾಯಿಸಲು ಹಾಗೂ ಭಾರತದ ಪಾರಂಪರಿಕ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ರ್ಯಾಂಡ್ ಆಗಿ ಪರಿವರ್ತಿಸಲು ಈ ಯೋಜನೆ ನೆರವಾಗಲಿದೆ ಎಂಬ ವಿಶ್ವಾಸವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ








