ADVERTISEMENT
Tuesday, April 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

Shwetha by Shwetha
April 21, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದಾರೆ. ಪ್ರಧಾನಿಗಳು ತಮ್ಮ ಕಿವಿಯಲ್ಲಿ ಪಿಸುಗುಟ್ಟಿದ ಆ ರಹಸ್ಯವೇನು ಎಂಬುದನ್ನು ಸಿಎಂ ಇದೀಗ ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನನ್ನ ಹತ್ತಿರ ಬಂದು ಕಿವಿಯಲ್ಲಿ ಮಹಿಳಾ ಮೀಸಲಾತಿ ವಿಚಾರದಲ್ಲಿ ನಿಮ್ಮ ವೈಯಕ್ತಿಕ ನಿಲುವು ಏನು ಎಂದು ಪ್ರಶ್ನಿಸಿದರು. ಅದಕ್ಕೆ ತಕ್ಷಣವೇ ಉತ್ತರಿಸಿದ ನಾನು, ನಾವು ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದು ಸ್ಪಷ್ಟಪಡಿಸಿದೆ ಎಂದು ರಹಸ್ಯವನ್ನು ಬಿಚ್ಚಿಟ್ಟರು.

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಮಹಿಳಾ ಮೀಸಲಾತಿ ಜಾರಿಯ ವಿಷಯದಲ್ಲಿ ಬಿಜೆಪಿ ಕೇವಲ ರಾಜಕೀಯ ಗಿಮಿಕ್ ಮಾಡುತ್ತಿದೆ ಹೊರತು ಅದಕ್ಕೆ ಯಾವುದೇ ಪ್ರಾಮಾಣಿಕ ಬದ್ಧತೆ ಇಲ್ಲ. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ವಿರೋಧಿಯಲ್ಲ. ಆದರೆ ಕೇಂದ್ರ ಸರ್ಕಾರ ಇದನ್ನು ಜಾರಿ ಮಾಡುವ ಹಾದಿಯಲ್ಲಿ ಅನುಸರಿಸುತ್ತಿರುವ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯ ಬಗ್ಗೆ ನಮ್ಮ ತಕರಾರು ಇದೆ. 2023ರಲ್ಲೇ ಈ ವಿಧೇಯಕ ಜಾರಿಗೆ ತರಲು ಅವಕಾಶವಿತ್ತು. ಆದರೆ ಅದನ್ನು ಈಗ ಜನಗಣತಿಯೊಂದಿಗೆ ತಳುಕು ಹಾಕಿ ವಿಳಂಬ ಮಾಡುತ್ತಿರುವುದು ಯಾಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ ಅವರು, ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯಾದರೆ ಕರ್ನಾಟಕಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ. ನಾವು ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದೇವೆ, ಆದರೆ ಉತ್ತರ ಭಾರತದ ರಾಜ್ಯಗಳು ಇದನ್ನು ಮಾಡಿಲ್ಲ. ಜನಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಅವರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡಿ, ನಿಯಮ ಪಾಲಿಸಿದ ನಮಗೆ ಅನ್ಯಾಯ ಮಾಡುವುದು ಸರಿಯಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಭೌಗೋಳಿಕ ವ್ಯಾಪ್ತಿ ಮತ್ತು ಜನಸಂಖ್ಯೆಯ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ತಿಳಿಸಿದರು.

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಬಗ್ಗೆಯೂ ಭವಿಷ್ಯ ನುಡಿದ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಬಾರಿಸಲಿದೆ. ಇನ್ನು ಕಾಂಗ್ರೆಸ್ ಜಾರಿಗೆ ತಂದಿದ್ದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಈ ಹಿಂದೆ ಉಚಿತ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಅನಿವಾರ್ಯವಾಗಿ ಅದೇ ಯೋಜನೆಗಳನ್ನು ನಕಲು ಮಾಡಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಲೇವಡಿ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.

ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ನಾವೀಗ ವಿಶ್ವಗುರು ಅಲ್ಲ ಆ ಪದ ಬಳಸುವುದನ್ನು ನಿಲ್ಲಿಸಿ : ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಖಡಕ್ ಮಾತು

ನಾವೀಗ ವಿಶ್ವಗುರು ಅಲ್ಲ ಆ ಪದ ಬಳಸುವುದನ್ನು ನಿಲ್ಲಿಸಿ : ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಖಡಕ್ ಮಾತು

by Shwetha
April 21, 2026
0

ದೆಹಲಿ: ಭಾರತವು ಪ್ರಸ್ತುತ ವಿಶ್ವಗುರು ಆಗಿಲ್ಲ ಮತ್ತು ಅಂತಹ ಪದಗಳನ್ನು ಬಳಸುವುದನ್ನು ನಾವು ಈಗಲೇ ನಿಲ್ಲಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram