ಕೆಂಪೇಗೌಡರ ರೀತಿ ವಿಶೇಷ ಪೇಟ ಧರಿಸಿದ ಪ್ರಧಾನಿ ಮೋದಿ…
ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರಗತಿಯ ಪ್ರತಿಮೆಯನ್ನ ಅನಾವರಣ ಮಾಡಿದ್ದಾರೆ. ನಂತರ ಸಾರ್ವಜನಿಕ ಸಮಾವೇಶವನ್ನ ಉದ್ದೇಶಿಸಲು ಮಾತನಾಡಲು ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೆಂಪೇಗೌಡರ ರೀತಿಯ ವಿಶೇಷ ಪೇಟವನ್ನ ತೊಡಿಸಿ ಸಿ ಎಂ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದ್ದಾರೆ.
ಮೈಸೂರಿನ ಕಲಾವಿದ ನಂದನ್ ಎಂಬುವವರು ಬನಾರಸ್ ರೇಷ್ಮೆ ಬಳಸಿ ಈ ಪೇಟವನ್ನು ತಯಾರಿಸಿದ್ದಾರೆ. ಇದಕ್ಕೆ 10 ದಿನಗಳನ್ನ ತೆಗೆದುಕೊಂಡಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದ ಭುವನಹಳ್ಳಿಯಲ್ಲಿ ಸಾರ್ವಜನಿಕ ಸಮಾವೇಶ ಏರ್ಪಡಿಸಲಾಗಿದ್ದು, ಮೋದಿ ವೇದಿಕೆಗೆ ಆಗಮಿಸುತ್ತಿದ್ದಂತೆ ಜನರು ಮೋದಿ ಮೋದಿ ಎಂದು ಘೋಷಣೆ ಕೂಗಿ ಸ್ವಾಗತಿಸಿದ್ದಾರೆ.
ವೇದಿಕೆಯಲ್ಲಿ ಕನಕದಾಸರು, ಒನಕೆ ಓವಬ್ಬ ಹಾಗೂ ಕೆಂಪೇಗೌಡರ ಚಿತ್ರಪಟಗಳಿಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಮೋದಿ ಅವರನ್ನು ಆಶೀರ್ವದಿಸಿದರು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎ.ನಾರಾಯಣಸ್ವಾಮಿ, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಸ್.ಎಂ.ಕೃಷ್ಣ, ಸದಾನಂದಗೌಡ, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಸಂಸದ ಮುನಿಸ್ವಾಮಿ ಹಾಜರಿದ್ದಾರೆ.
Modi in Bangalore: Prime Minister Modi wearing a special turban like Kempegowda…








