ನಾಳೆ ಬೆಂಗಳೂರಿನಲ್ಲಿ ಮೋದಿ – ಪ್ರಧಾನಿ ಹಾದು ಹೋಗುವ ಮಾರ್ಗದ ಕಾಲೇಜುಗಳಿಗೆ ರಜೆ ಘೋಷಣೆ..
ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದು ವಿಶ್ವ ಯೋಗ ದಿನ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಿ ಭದ್ರತೆಯ ದೃಷ್ಠಿಯಿಂದ ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜ್ಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.