ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಟಲ್ ಸುರಂಗ ಮಾರ್ಗ ಲೋಕಾರ್ಪಣೆ : ವಿಶೇಷತೆಗಳು ಹೀಗಿವೆ

admin by admin
October 3, 2020
in National, Newsbeat, ದೇಶ - ವಿದೇಶ
Atal Tunnel
Share on FacebookShare on TwitterShare on WhatsappShare on Telegram

ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶ್ವದ ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 9.2 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಉದ್ಘಾಟಿಸಿದ್ದಾರೆ.

ಇಂದು ಬೆಳಗ್ಗೆ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಗಳು, ಬೆಳಗ್ಗೆ 10.15ರ ಸುಮಾರಿಗೆ ಹಿಮಾಚಲಪ್ರದೇಶದ ರೋಹ್ಟಂಗ್ ನಲ್ಲಿರುವ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಿದರು. ಪ್ರಧಾನಿಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಗಣ್ಯರು ಸಾಥ್ ನೀಡಿದರು.Atal tunnel Modi

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಈ ಸುರಂಗವನ್ನು ನಿರ್ಮಿಸುವ ತೀರ್ಮಾನವನ್ನು 2000, ಜೂನ್ 3ರಂದು ಅಂದಿನ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ತೆಗೆದುಕೊಂಡಿದ್ದರು. 2002, ಮೇ 26ರಂದು ಇದಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗಿತ್ತು.

ಬಳಿಕ 2019, ಡಿಸೆಂಬರ್ 25ರಂದು ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ‘ಅಟಲ್ ಸುರಂಗ’ ಎಂದು ಮರುನಾಮಕರಣ ಮಾಡಲಾಯಿತು.

ಈ ಅಟಲ್ ಸುರಂಗ ಮಾರ್ಗ ಮನಾಲಿಯಿಂದ ಲೇಹ್-ಸ್ಟಿತಿ ಕಣಿವೆಯನ್ನು ಸಂಪರ್ಕಿಸುತ್ತದೆ. ಇದು ವಿಶ್ವದ ಅತ್ಯಂತ ಉದ್ದವಾದ ಹೆದ್ದಾರಿ ಸುರಂಗ ಮಾರ್ಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಸಮುದ್ರ ಮಟ್ಟದಿಂದ 3 ಸಾವಿರ ಮೀಟರ್ ಎತ್ತರದಲ್ಲಿದೆ.

9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣವೆÂಯನ್ನು ವರ್ಷವಿಡೀ ಸಂಪರ್ಕಿಸಲಿದೆ. ಇದಕ್ಕೂ ಮುನ್ನ ಭಾರೀ ಹಿಮಪಾತದ ಕಾರಣ 6 ತಿಂಗಳುಗಳ ಕಾಲ ಮಾತ್ರ ಕಣಿವೆಯ ಸಂಪರ್ಕ ಕಡಿತವಾಗುತ್ತಿತ್ತು. ಈ ಸುರಂಗ ಮಾರ್ಗವು ಮನಾಲಿ ಮತ್ತು ಲೆಹ್ ನಡುವಿನ ಅಂತರವನ್ನು 46 ಕಿ.ಮೀ. ತಗ್ಗಿಸಲಿದ್ದು, 5 ಗಂಟೆಗಳ ಸಮಯ ಉಳಿತಾಯವಾಗಲಿದೆ.

ಇದನ್ನೂ ಓದಿ : ದೇಶದಲ್ಲಿ ಕೊರೊನಾ ರಣಕೇಕೆ : ಲಕ್ಷದ ಗಡಿ ದಾಟಿದ ಮೃತರ ಸಂಖ್ಯೆ

ಈ ಸುರಂಗ ಮಾರ್ಗವನ್ನು ಅಲ್ಟ್ರಾ ಮಾಡರ್ನ್ ಸ್ಪೆಸಿಫಿಕೇಷನ್ಸ್ ಗಳೊಂದಿಗೆ ನಿರ್ಮಿಸಲಾಗಿದೆ. ಸುರಂಗದ ದಕ್ಷಿಣ ಭಾಗದಲ್ಲಿ ಮನಾಲಿಯಿಂದ 25 ಕಿ.ಮೀ. ದೂರದಲ್ಲಿ, 3,060 ಮೀಟರ್ ಎತ್ತರದಲ್ಲಿದೆ. ಉತ್ತರದ ಭಾಗದ ಸುರಂಗವು ಲಹೌಲ್ ಕಣಿವೆಯ ಸಿಸ್ಸು, ತೆಲಿಂಗ್ ಗ್ರಾಮದ ಬಳಿಯಿದ್ದು, 3,071 ಮೀಟರ್ ಎತ್ತರದಲ್ಲಿದೆ. ಇದು ಕುದುರೆಯ ಲಾಳದ ಆಕಾರದಲ್ಲಿರುವ, ದ್ವಿಪಥ ಮಾರ್ಗದ ಸುರಂಗವಾಗಿದೆ. 8 ಮೀಟರ್ ರಸ್ತೆ ಮಾರ್ಗವನ್ನು ಒಳಗೊಂಡಿದೆ.Rohtang Atal Tunnel

ಇದರಲ್ಲಿ 5.525 ಮೀಟರ್ ಎತ್ತರದವರೆಗಿನ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸುರಂಗ 10.5 ಮೀಟರ್ ಅಗಲವಿದ್ದು, ಮುಖ್ಯ ಸುರಂಗದಲ್ಲಿ 3.6 x 2.25 ಮೀಟರ್ ಅಗ್ನಿನಿರೋಧಕ ತುರ್ತು ನಿರ್ಗಮನದ ಸುರಂಗವನ್ನೂ ಒಳಗೊಂಡಿದೆ.

ಸುರಂಗ ಮಾರ್ಗವೂ ಸುಸಜ್ಜಿತ ಎಲೆಕ್ಟ್ರೋ ಮೆಕ್ಯಾನಿಕಲ್ ವ್ಯವಸ್ಥೆ ಹೊಂದಿದೆ. ಇದರಲ್ಲಿ ಸೆಮಿ ಟ್ರಾನ್ಸ್ ವರ್ಸ್ ವಾತಾಯಣ ವ್ಯವಸ್ಥೆ, ಎಸ್.ಸಿ.ಎ.ಡಿ.ಎ. ನಿಯಂತ್ರಿತ ಅಗ್ನಿಶಾಮಕ ಹೋರಾಟ ವ್ಯವಸ್ಥೆ, ಪ್ರಕಾಶಮಾನ ಬೆಳಕು ಮತ್ತು ಸಿಸಿಟಿವಿ ನಿಗಾ ವ್ಯವಸ್ಥೆಯೂ ಸೇರಿದೆ.

ಇನ್ನು ಈ ಸುರಂಗದಲ್ಲಿ..

ಪ್ರತೀ 150 ಮೀಟರ್ ಅಂತರದಲ್ಲಿ ಒಂದು ಟೆಲಿಫೋನ್
ಪ್ರತೀ 250 ಮೀಟರ್ ದೂರದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಇದರಲ್ಲಿ ಇನ್‍ಸಿಡೆಂಟ್ ಡಿಟೆಕ್ಟಿವ್ ಸಿಸ್ಟಂ ಇದ್ದು, ಅವಘಡ ಸಂಭವಿಸಿದರೆ, ತತ್‍ಕ್ಷಣ ಕೇಂದ್ರ ಘಟಕಕ್ಕೆ ಸಂದೇಶ ಕಳುಹಿಸುತ್ತದೆ.
ಪ್ರತೀ 60 ಮೀಟರ್‍ಗೆ ಅಗ್ನಿಶಾಮಕ ಉಪಕರಣಗಳನ್ನು ಅಳವಡಿಸಲಾಗಿದೆ.
ಪ್ರತೀ 500 ಮೀಟರ್‍ಗೆ ತುರ್ತು ನಿರ್ಗಮನ ವ್ಯವಸ್ಥೆ.
ಪ್ರತೀ 1 ಕಿ.ಮೀ.ಗೆ ವಾಯುಗುಣ ಮಟ್ಟವನ್ನು ಪತ್ತೆ ಹಚ್ಚುವ ಸಾಧನ.
ಬಿಆರ್‍ಒ ಅಧಿಕಾರಿಗಳ ಪ್ರಕಾರ ವಾಹನಗಳ ಗರಿಷ್ಠ ಮಿತಿ
ಪ್ರತೀ ಗಂಟೆಗೆ 80 ಕಿಲೋ ಮೀಟರ್ ಇರಲಿದೆ.
ನಿತ್ಯವೂ 1,500ಕ್ಕೂ ಅಧಿಕ ಟ್ರಕ್‍ಗಳು, 3,000ಕ್ಕೂ ಅಧಿಕ ಕಾರುಗಳು ಸುರಂಗ ಮಾರ್ಗವನ್ನು ಬಳಸುವ ನಿರೀಕ್ಷೆ ಇದೆ.

Tags: Atal TunnelModiNarendra modiPrime ministerRohtangShimla
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram