50 ಕೋಟಿ ಡೋಸ್ ದಾಟಿದ ಲಸಿಕೆ ಅಭಿಯಾನ – ಮೋದಿ
ನವದೆಹಲಿ: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಲಸಿಕೆ ಅಭಿಯಾನವೂ ದೇಶದಲ್ಲಿ ವೇಗ ಪಡೆದುಕೊಂಡಿದೆ.. ಇತ್ತೀಚೆಗೆ ದೇಶದ ನಾನಾ ರಾಜ್ಯಗಳಲ್ಲಿ ಲಸಿಕೆ ಕೊರತೆಯಾಗಿದೆ ಅಂತ ಹೇಳಲಾಗ್ತಿದೆ.. ಈ ನಡುವೆ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಶುರುವಾಗಿ 6 ತಿಂಗಳು ಕಳೆದಿದೆ. ಜನವರಿ 16 ರಂದು ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿತ್ತು. ಅಲ್ಲಿಂದ ಇಲ್ಲಿವರೆಗೆ 50 ಕೋಟಿ ಡೋಸ್ ಹಂಚಿಕೆಯಾಗಿದೆ ಎಂದು ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ
ಸರ್ವರಿಗೂ ಉಚಿತ ಲಸಿಕೆ ಹಾಕುವ ಕಾರ್ಯಕ್ಕೆ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿತ್ತು, ಹಂತ ಹಂತವಾಗಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದ ಕೇಂದ್ರ ಸರ್ಕಾರ ನಿನ್ನೆಗೆ 50 ಕೋಟಿಗೂ ಹೆಚ್ಚು ಡೋಸ್ ವಿತರಣೆಯಾಗಿದೆ ಎಂದು ತಿಳಿಸಿದೆ. ಶುಕ್ರವಾರ 43.29 ಲಕ್ಷ ಡೋಸ್ ಸೇರಿ ದೇಶದಲ್ಲಿ ಬೃಹತ್ ಕೋವಿಡ್ ಲಸಿಕೆ ಅಭಿಯಾನದಲ್ಲಿ ವಿತರಣೆಯಾಗಿರುವ ಲಸಿಕೆಗಳ ಒಟ್ಟು ಸಂಖ್ಯೆ 50 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಕೋವಿಡ್-19 ವಿರುದ್ಧದ ಭಾರತದ ಹೋರಾಟವು ಬಲವಾದ ಉತ್ತೇಜನವನ್ನು ಪಡೆದಿದ್ದು, ಲಸಿಕೆಯ ಡೋಸ್ ಸಂಖ್ಯೆಗಳು 50 ಕೋಟಿ ಗಡಿ ದಾಟಿದೆ ನಮ್ಮ ಲಸಿಕಾ ಅಭಿಯಾನದಡಿ ಲಸಿಕೆ ಹಾಕುವುದನ್ನು ಮುಂದುವರಿಸುತ್ತೇವೆ ಎಂದು ನಾವು ಖಚಿತಪಡಿಸುತ್ತೇನೆ ಎಂದು ಮೋದಿ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ದೇಶದಲ್ಲಿ ಜನವರಿ 16 ರಂದು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ ಎರಡನೇ ಹಂತದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಫೆಬ್ರವರಿ 2 ರಿಂದ ಲಸಿಕೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿತ್ತು.
ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊ ಶೇರ್ ಮಾಡಿದ್ದ ರಾಹುಲ್ ಗಾಂಧಿ – ಟ್ವೀಟ್ ಡಿಲೀಟ್ ಮಾಡಿದ ಟ್ವಿಟರ್
ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಲಸಿಕೆ ಅಭಿಯಾನ ಆರಂಭಗೊಂಡಿತ್ತು. ಮೂರನೇ ಹಂತದ ಅಭಿಯಾನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಇರುವವರಿಗೆ ಲಸಿಕೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶವನ್ನು ಮಾಡಿಕೊಟ್ಟಿತ್ತು.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








