ವಾಷಿಂಗ್ಟನ್: ಮುಂದಿನ ವಾರ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ.
ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಟ್ರಂಪ್ ಮಿಚಿಗನ್ನಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ಮೋದಿ ಅವರು ಮುಂದಿನ ವಾರ ನನ್ನನ್ನು ಭೇಟಿಯಾಗಲು ಬರುತ್ತಾರೆ ಎಂದು ಹೇಳಿದ್ದಾರೆ. ಮೋದಿ ಅವರು ಸೆ.21 ರಿಂದ 23 ರವರೆಗೆ ಯುನೈಟೆಡ್ ಸ್ಟೇಟ್ಸ್ಗೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ. ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆ ಇದು. ವಿಲ್ಮಿಂಗ್ಟನ್, ಡೆಲವೇರ್ನಲ್ಲಿ US ಅಧ್ಯಕ್ಷ ಜೋ ಬೈಡೆನ್ ಭಾಗವಹಿಸಲಿದ್ದಾರೆ. ಅವರು ಭಾನುವಾರ ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಿಎಂ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಕೊನೆಯ ಬಾರಿಗೆ 2020 ರ ಫೆಬ್ರವರಿಯಲ್ಲಿ ಭೇಟಿಯಾಗಿದ್ದರು.