ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹೀಗಾಗಿ ಬಿಜೆಪಿ ಪಾಳಯದಲ್ಲಿ ಹರ್ಷ ಮೆರೆಯುತ್ತಿದೆ. ಹೀಗಾಗಿಯೇ ದೇಶಕ್ಕೆ ಮೋದಿಯೇ ಗ್ಯಾರಂಟಿ (ModiKiGuarantee) ಎಂದು ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ.
ಕರ್ನಾಟಕ (Karnataka) ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್ (Congress) ಸದ್ಯ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ (Congress Guarantee) ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ, ಹಲವೆಡೆ ಕಾಂಗ್ರೆಸ್ ನ ಗ್ಯಾರಂಟಿಗಳು ಮುಗ್ಗರಿಸಿವೆ. ಇದಕ್ಕೂ ಮುನ್ನ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು, ಹಸಿ ಸುಳ್ಳಿನ ಭರವಸೆ ನಾನು ನೀಡುವಿದಿಲ್ಲ. ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ (Economy) ಭಾರತದ (India) ಹೆಸರು ಸೇರಿಕೊಳ್ಳಲಿದೆ. ಇದು ನಾನು ನೀಡುವ ಭರವಸೆ ಎಂದು ಹೇಳಿದ್ದರು. ಸದ್ಯ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದು, ಬಿಜೆಪಿಗರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ.