ಮೈಸೂರು: ರಾಜ್ಯ ಸೇರಿದಂತೆ ದೇಶದಲ್ಲಿ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರ್ನಾಟಕದಲ್ಲಿ ಇಂದು ಮೋದಿ ಮತ ಬೇಟೆ ನಡೆಯಲಿದೆ.
ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಮೋದಿ ಬೃಹತ್ ಸಮಾವೇಶದಲ್ಲಿ ಮತ ಬೇಟೆ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ ಮತಯಾಚನೆಯೂ ನಡೆಸಲಿದ್ದಾರೆ. ಬಳಿಕ ಸಂಜೆ 7:45ರ ವೇಳೆಗೆ ಮಂಗಳೂರಿನಲ್ಲಿ ಅದ್ಧೂರಿ ರೋಡ್ ಶೋ ನಡೆಸಲಿದ್ದು, ಬಿಜೆಪಿ-ಜೆಡಿಎಸ್ ಸಾಥ್ ನೀಡಲಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿ ಸಾರ್ವಜನಿಕ ಸಭೆ ಹಿನ್ನೆಲೆ, ಮೋದಿ ಸಂಚರಿಸುವ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಹುಣಸೂರು ರಸ್ತೆ ಮಾರ್ಗವಾಗಿ ಆಗಮಿಸುವ ಸಾರಿಗೆ ಬಸ್ ಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.