ನವದೆಹಲಿ: ಲಾಕ್‍ಡೌನ್ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖುದ್ದು ಭೇಟಿಯಾಗಿದ್ದಾರೆ.
ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಭೇಟಿಯಾದ ಬಿಎಸ್‍ವೈ, ರಾಜ್ಯದಲ್ಲಿ ಉಂಟಾದ ನೆರೆ, ಕಳಸಾ ಬಂಡೂರಿ ಯೋಜನೆ ಹಾಗೂ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ವಿಶೇಷವಾಗಿ ಕಳೆದ ವರ್ಷ ಹಾಗೂ ಈ ವರ್ಷ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದಿದ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳಲು ಅನುದಾನದ ಕೊರತೆ ಉಂಟಾಗಿದೆ. ಹೀಗಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಯಡಿಯೂರಪ್ಪ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲಾ ಯೋಜನೆಗೆ ಬಾಕಿ ಉಳಿದಿರುವ ಆಡಳಿತಾತ್ಮಕ ಅನುಮೋದನೆ ಹಾಗೂ ಜಿಎಸ್‍ಟಿ ಪಾಲಿನ ಮೊತ್ತ ಬಿಡುಗಡೆ ಮಾಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರದಿಂದ ಹೆಚ್ಚಿನ ಅನುದಾನ ಲಭ್ಯವಾದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಎಸ್‍ವೈ ಭರವಸೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








