ಅಯೋಧ್ಯೆ: ಇಂದು ರಾಮನ ಊರಲ್ಲಿ ಪ್ರಧಾನಿ ಮೋದಿ ಮೆಗಾ ಶೋ ನಡೆಸುತ್ತಿದ್ದಾರೆ. ರಾಮನ ಭಕ್ತರ ಸ್ವಾಗತಕ್ಕೆ ಸಜ್ಜಾಗಿರುವ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ (ಡಿ.30) ಭೇಟಿ ನೀಡುತ್ತಿದ್ದಾರೆ.
ಜ. 22ಕ್ಕೆ ಉತ್ತರ ಪ್ರದೇಶದಲ್ಲಿಮ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ಆದರೆ, ಇದಕ್ಕೂ ಮುನ್ನ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ, ಅಭಿವೃದ್ಧಿಗೊಂಡಿರುವ ರೈಲು ನಿಲ್ದಾಣವನ್ನೂ (Revamped Railway Station) ಮೋದಿ ಉದ್ಘಾಟಿಸಲಿದ್ದಾರೆ.
11 ಸಾವಿರ ಕೋಟಿ ರೂ. ಮೌಲ್ಯದ ಅಯೋಧ್ಯೆ ಅಭಿವೃದ್ಧಿ ಕಾಮಗಾರಿ, ಉತ್ತರ ಪ್ರದೇಶದ 4,600 ಕೋಟಿ ರೂ.ಗಳಷ್ಟು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ರಸ್ತೆ, ಹೆದ್ದಾರಿ, ವಿಮಾನ, ರೈಲ್ವೇ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ಒಳಗೊಂಡಿವೆ. ಇದೇ ದಿನ 6 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ 2 ಅಮೃತ್ ಭಾರತ್ ರೈಲುಗಳಿಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ. ನಂತರ ಏರ್ ಪೋರ್ಟ್ ನಿಂದ 15 ಕಿ.ಮೀ ರೋಡ್ ಶೋನಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.