ಕೊರೊನಾ ಮಾಹಾಮಾರಿಗೆ ಪ್ರಧಾನಿ ಮೋದಿ ಚಿಕ್ಕಮ್ಮ ಬಲಿ..!
ಗುಜರಾತ್ : ಕೊರೊನಾಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾ ಬೆನ್ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಚಿಕ್ಕಮ್ಮ ನರ್ಮದಾ ಬೇನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು 10 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಹಮದಾಬಾದ್ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 80 ವರ್ಷದ ನರ್ಮದಾಬೇನ್ ಅಹಮದಾಬಾದ್ನ ನ್ಯೂ ರಾಣಿಪ್ ಪ್ರದೇಶದಲ್ಲಿ ಮಕ್ಕಳ ಜೊತೆ ವಾಸವಾಗಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.