Modi: ಜಾಗತಿಕ ಉನ್ನತ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಯೇ ನಂಬರ್ ಒನ್ !
ಜಾಗತಿಕ ಉನ್ನತ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ನಡೆಸಿದ ಸರ್ವೆಯಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ಅಗ್ರಸ್ಥಾನದಲ್ಲಿದ್ದು, ಈ ಮಾಹಿತಿಯನ್ನು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಸರ್ವೆ ಪ್ರಕಾರ ಪ್ರಧಾನಿ ಮೋದಿ 77%ರಷ್ಟು ರೇಟಿಂಗ್ ನೊಂದಿಗೆ ಜಾಗತಿಕ ಉನ್ನತ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಇದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ 56%ರಷ್ಟು ರೇಟಿಂಗ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಅಮೆರಿಕದ ಅಧ್ಯಕ್ಷ ಜೋ ಬೈಡನ್ 41%ರಷ್ಟು ರೇಟಿಂಗ್ ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Modi: Prime Minister Modi is number one in the list of top global leaders!