ಪಂಜಾಬ್ ನಲ್ಲಿ ‘ಪ್ರಧಾನಿ’ ಭದ್ರತಾ ಲೋಪ : ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ
ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವಾಗ ಅವರ ಸಂಚಾರಕ್ಕೆ ಅಡೆಚಣೆ ಉಂಟುಮಾಡಿದ ಪ್ರಕರಣ ದೇಶಾದ್ಯಂತ ಸಂಚಲವನ್ನೇ ಸೃಷ್ಟಿ ಮಾಡಿತ್ತು.. ಬಿಜೆಪಿ ನಾಯಕರು , ಹಾಗೂ ಇನ್ನೂ ಹಲವರು ಪಂಜಾಬ್ ಸರ್ಕಾರವನ್ನ ಭದ್ರತಾ ಲೋಪಕ್ಕಾಗಿ ಕಟುವಾಗಿ ಟೀಕಿಸಿದ್ರು..
ಇದೇ ಪ್ರಕರಣ ಸಂಬಂಧ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.. ಪ್ರಧಾನಮಂತ್ರಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್‌ಪುರ್‌ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಲಾಯರ್ಸ್ ವಾಯ್ಸ್ ಸಂಘಟನೆ ಈ ಬಗ್ಗೆ ಅರ್ಜಿ ಸಲ್ಲಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಭದ್ರತಾ ವೈಪಲ್ಯ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.








