ನವದೆಹಲಿ : ಕಾಂಗ್ರೆಸ್ ಪಕ್ಷ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಹೋರಾಡಿದವರಿಗೆ ನಮನ ಸಲ್ಲಿಸಿದ್ದಾರೆ. ಜೊತೆಗೆ 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದ ಎಲ್ಲರ ತ್ಯಾಗವನ್ನು ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಇಂದಿಗೆ 45 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ, ಚಿತ್ರಹಿಂಸೆ ಅನುಭವಿಸಿದ ಎಲ್ಲರಿಗೂ ನನ್ನ ನಮನಗಳು’ ಎಂದು ಉಲ್ಲೇಖಿಸಿದ್ದಾರೆ. ಈ ಎಲ್ಲರ ತ್ಯಾಗ, ಹೋರಾಟವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
https://twitter.com/narendramodi/status/1276049217874620416?s=20
ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. 1977ರ ಮಾರ್ಚ್ 21ರವರೆಗೆ ಬರೋಬ್ಬರಿ 21 ತಿಂಗಳ ಕಾಲ ತುರ್ತುಪರಿಸ್ಥಿತಿ ಇತ್ತು. ಈ ಅವಧಿಯಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ‍್ಯದಿಂದ ಹಿಡಿದು ಎಲ್ಲವನ್ನೂ ಇಂದಿರಾ ಗಾಂಧಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಇಂದಿರಾ ಗಾಂಧಿ ಅವರ ಈ ನಡೆಯನ್ನು ಖಂಡಿಸಿ, ದೇಶದಾದ್ಯಂತ ಹೋರಾಟಗಳು ನಡೆದವು. ಈ ವೇಳೆ ಹಲವರನ್ನು ಬಂಧಿಸಲಾಗಿತ್ತು.