Bundelkhand Expressway | ಪ್ರಧಾನಿಯಿಂದ ಇಂದು ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಅನ್ನು ಉದ್ಘಾಟಿಸಲಿದ್ದಾರೆ.
2020ರ ಫೆಬ್ರವರಿಯಲ್ಲಿ ನರೇಂದ್ರ ಮೋದಿ ಅವರು ಲಕ್ನೋ – ಆಗ್ರಾ ಸಂಪರ್ಕಿಸುವ ನಾಲ್ಕು – ಪಥದ ಎಕ್ಸ್ ಪ್ರೆಸ್ ವೇ ಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
28 ತಿಂಗಳಲ್ಲಿ ಈ ಯೋಜನೆ ಪೂರ್ಣಗೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ.

ಈ ಚರ್ತುಷ್ಪಥ ಎಕ್ಸ್ ಪ್ರೆಸ್ ವೇ ಸುಮಾರು 14,850 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ.
ಅಂದಹಾಗೆ ಉತ್ತರ ಪ್ರದೇಶ ಎಕ್ಸ್ ಪ್ರೆಸ್ ವೇಸ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಅಥಾರಿಟಿ ಅಡಿಯಲ್ಲಿ ಸುಮಾರು 14,850 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಚತುಷ್ಪಥದ ಎಕ್ಸ್ ಪ್ರೆಸ್ ವೇಯನ್ನು ನಿರ್ಮಿಸಲಾಗಿದೆ.
ಇದನ್ನು ಆರು ಲೇನ್ ಗಳಿಗೆ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಎಕ್ಸ್ ಪ್ರೆಸ್ ವೇ ಈ ಪ್ರದೇಶದಲ್ಲಿನ ಸಂಪರ್ಕ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ.