ಕೊರೊನಾ ವಿರುದ್ಧದ ಉತ್ತರ ಪ್ರದೇಶದ ಹೋರಾಟವನ್ನು ಶ್ಲಾಘಿಸಿದ ಮೋದಿ
ಉತ್ತರಪ್ರದೇಶ : ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವೂ ಕೊರೋನಾ ಸಾಂಕ್ರಾಮಿಕ ರೋಗದ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿರುವ ಬಗ್ಗೆ ಇತ್ತೀಚೆಗೆ ಆಸ್ಟ್ರೇಲಿಯಾ ಸಂಸದ ಕ್ರೇಗ್ ಕೆಲ್ಲಿ ಹೊಗಳಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗಿ ಆದಿತ್ಯನಾಥ್ ಅವರ ಸಹಾಯ ಕೋರಿದ್ದರು..
ಇದೀಗ ಉತ್ತರಪ್ರದೇಶ ಸರ್ಕಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ವಾರಣಾಸಿಯಲ್ಲಿ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಶಿಶು ಮತ್ತು ತಾಯಂದಿರ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಮೋದಿ ಕೋವಿಡ್-19 ಸಾಂಕ್ರಾಮಿಕವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ ಸಿಎಂ ಯೋಗಿ ಆದಿತ್ಯನಾಥ್ ರನ್ನು ಶ್ಲಾಘಿಸಿದರು.
ದೇಶದ್ರೋಹ ಕಾನೂನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿ ಪರಿಶೀಲನೆಗೆ ಸುಪ್ರೀಂ ಅಸ್ತು
ಕೊವಿಡ್ 19 ಎರಡನೇ ಅಲೆಯನ್ನು ಉತ್ತರಪ್ರದೇಶ ಎದುರಿಸಿ, ನಿಯಂತ್ರಿಸಿದ ರೀತಿ ನಿಜಕ್ಕೂ ಅದ್ಭುತವಾಗಿದ್ದು, ಅನುಕರಣೀಯ. ಅದಕ್ಕಾಗಿ ಇಲ್ಲಿನ ಆರೋಗ್ಯ ಕಾರ್ಯಕರ್ತರು, ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವತ್ತು ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಟೆಸ್ಟಿಂಗ್ ಮಾಡಿರುವ ರಾಜ್ಯವೆಂದರೆ ಅದು ಉತ್ತರ ಪ್ರದೇಶ. ಅಷ್ಟೇ ಅಲ್ಲ, ತುಂಬ ವೇಗವಾಗಿ ಕೊರೊನಾ ಲಸಿಕೆ ಅಭಿಯಾನ ನಡೆಸುತ್ತಿದ್ದು, ದೇಶದಲ್ಲೇ ಅತ್ಯಂತ ಹೆಚ್ಚು ಜನರಿಗೆ ಲಸಿಕೆ ನೀಡಿದ ರಾಜ್ಯವಾಗಿದೆ ಎಂದು ಹೇಳಿದ್ದಾರೆ.
ಕಾಶಿ ಪೂರ್ವಾಂಚಲದ ಅತ್ಯಂದ ದೊಡ್ಡ ವೈದ್ಯಕೀಯ ಹಬ್ ಆಗಿ ಬದಲಾಗುತ್ತಿದೆ. ಈ ಹಿಂದೆ ಇಲ್ಲಿನ ಜನರು ಕೆಲವು ರೋಗಗಳ ಚಿಕಿತ್ಸೆಗೆ ಮುಂಬೈ ಅಥವಾ ದೆಹಲಿಯ ದೊಡ್ಡ ಆಸ್ಪತ್ರೆಗಳಿಗೆ ಹೋಗಬೇಕಾಗಿತ್ತು. ಇದೀಗ ಆ ವೈದ್ಯಕೀಯ ಸೌಲಭ್ಯಗಳನ್ನೆಲ್ಲ ಕಾಶಿಗೆ ಒದಗಿಸಲಾಗುತ್ತಿದೆ. ಇದರಿಂದ ಇಲ್ಲಿನ ಜನರಿಗೆ ಖಂಡಿತ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ : ಇಂದಿನಿಂದ ಗರ್ಭಿಣಿಯರಿಗೂ ಕೊರೋನಾ ಲಸಿಕೆ ವಿತರಣೆ
ಒಂದು ಕಾಲದಲ್ಲಿ ಉತ್ತರಪ್ರದೇಶದಲ್ಲಿ ಯಾವುದೇ ಉದ್ಯಮ ಮಾಡುವುದೇ ಕಷ್ಟ ಎಂಬ ಪರಿಸ್ಥಿತಿ ಇತ್ತು. ಆದರೆ ಇಂದು ಈ ರಾಜ್ಯ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಅತ್ಯಂತ ಒಳ್ಳೆಯ ಪ್ರದೇಶವಾಗಿದೆ. 2017ಕ್ಕೂ ಮೊದಲು ಉತ್ತರಪ್ರದೇಶಕ್ಕೆ ಯಾವುದೇ ಅಭಿವೃದ್ಧಿ ಯೋಜನೆಗಳೂ ಇರಲಿಲ್ಲ. ನಮ್ಮ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಅನುದಾನ ಬಿಡುಗಡೆ ಮಾಡಿದರೂ ಅದು ಬಳಕೆಯಾಗುತ್ತಿರಲಿಲ್ಲ. ಆದರೆ ನಂತರ ಸಿಎಂ ಯೋಗಿಜೀ ಉತ್ತರಪ್ರದೇಶ ಅಭಿವೃದ್ಧಿಗಾಗಿ ತುಂಬ ಶ್ರಮಿಸಿದರು, ಈಗಲೂ ಶ್ರಮಿಸುತ್ತಿದ್ದಾರೆ.
ಐಟಿ ಕಾಯ್ದೆಯ ಸೆಕ್ಷನ್ 66 ಎ ಅಡಿ ಪ್ರಕರಣಗಳನ್ನು ದಾಖಲಿಸದಂತೆ ನಿರ್ದೇಶಿಸಿದ ಕೇಂದ್ರ ಗೃಹ ಸಚಿವಾಲಯ
ಒಂದು ಕಾಲದಲ್ಲಿ ಉತ್ತರಪ್ರದೇಶದಲ್ಲಿ ಭಯೋತ್ಪಾದನೆ, ಮಾಫಿಯಾಗಳೆಲ್ಲ ಹಿಡಿತಕ್ಕೆ ಸಿಗುತ್ತಿರಲಿಲ್ಲ. ಈಗ ಎಲ್ಲವೂ ಬದಲಾಗಿದೆ. ಕಾನೂನು ಸುವ್ಯವಸ್ಥೆ ಪ್ರಬಲವಾಗಿದೆ. ಇಂದು ಉತ್ತರಪ್ರದೇಶ ಸರ್ಕಾರ ನಡೆಯುತ್ತಿರುವುದು ಅಭಿವೃದ್ಧಿ ಮೂಲಕವೇ ಹೊರತು ಭ್ರಷ್ಟಾಚಾರದಿಂದ ಅಲ್ಲ ಎಂದು ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಪ್ರಶ್ನಿಸಿ ‘ದೀದಿ’ ಸಲ್ಲಿಸಿರುವ ಅರ್ಜಿ ವರ್ಗಾವಣೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಸುವೇಂದು ಅಧಿಕಾರಿ